ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರ ಸರ್ಕಾರದ ಮತ್ತೊಂದು ಹೊಸ ಯೋಜನೆಯ ಬಗ್ಗೆ. ಕೇಂದ್ರ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಮತ್ತು ಬಾಣಂತಿಯರಿಗೆ 6000ಗಳನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತಿದೆ. ಹಾಗಾದರೆ ಕೇಂದ್ರ ಸರ್ಕಾರದ ಈ ಯೋಜನೆ ಯಾವುದು ಈ ಯೋಜನೆಯ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಹಾಗೂ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಜೊತೆಗೆ ಯಾವೆಲ್ಲ ದಾಖಲೆಗಳು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.
ಪ್ರಧಾನಮಂತ್ರಿ ಮಾತೃ ವಂದನ ಯೋಜನೆ :
ಕೇಂದ್ರ ಸರ್ಕಾರವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಆ ಯೋಜನೆ ಏನೆಂದರೆ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ. ಭಾರತ ಸರ್ಕಾರದಿಂದ ನಡೆಸಲ್ಪಡುವ ಮಾತೃ ಪ್ರಯೋಜನ ಕಾರ್ಯಕ್ರಮವಾಗಿದೆ ಎಂದು ಈ ಯೋಜನೆಯನ್ನು ಹೇಳಬಹುದು. ಈ ಯೋಜನೆಯ ಅಡಿಯಲ್ಲಿ 19 ವರ್ಷವಾದ ಕ್ಕಿಂತ ಹೆಚ್ಚಿನ ವಯಸ್ಸಿನ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ ಷರತ್ತು ಬದ್ಧ ನಗದು ವರ್ಗಾವಣೆಯನ್ನು ಮೊದಲ ನೇರ ಹೆರಿಗೆಗಾಗಿ ಮಾಡುವ ಯೋಜನೆಯಾಗಿದೆ. ಈ ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾಗಿದೆ. ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ಹೆಸರನ್ನು ನೋಂದಾಯಿಸಿಕೊಳ್ಳುವುದರ ಮೂಲಕ ಈ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪೋಸ್ಟ್ ಆಫೀಸ್ ಅಥವಾ ಅವರ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಾವತಿಸಲಾಗುತ್ತದೆ.
ಯೋಜನೆಯ ಪ್ರೋತ್ಸಾಹ ಧನ :
ಮೊದಲ ಸಲ ಗರ್ಭಿಣಿಯಾದ ಮಹಿಳೆಯರಿಗೆ ಹಾಗೂ ಬಾಣಂತಿ ಮಹಿಳೆಯರಿಗೆ ಈ ಯೋಜನೆಯ ಅಡಿಯಲ್ಲಿ 5000ಗಳನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ. ಎರಡನೇ ಬಾರಿ ಗರ್ಭಿಣಿಯು ಹೆಣ್ಣು ಮಗುವಿಗೆ ಜನನ ನೀಡಿದರೆ ಆಕೆಗೆ ಆರು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ನೀಡುವ ಈ ಪ್ರೋತ್ಸಾಹ ಧನವೂ ಗರ್ಭಿಣಿ ಅಥವಾ ಬಾಣಂತಿ ಮಹಿಳೆಯರು ಆರೋಗ್ಯವಂತ ಮಗುವಿನ ಜನನಕ್ಕೆ ಪೂರಕ ಪೌಷ್ಟಿಕ ಆಹಾರ ಹಾಗೂ ಮಗುವಿನ ಪಾಲನೆಗೆ ಈ ಹಣವನ್ನ ವಿನಿಯೋಗಿಸಬೇಕಾಗುತ್ತದೆ.
ಮೊದಲನೇ ಕತ್ತಿನಲ್ಲಿ 3000ಗಳನ್ನು ಈ ಯೋಜನೆಯ ಅಡಿಯಲ್ಲಿ ಗರ್ಭಿಣಿಯಾಗಿರುವ ಅಥವಾ ಬಾಣಂತಿ ಮಹಿಳೆಯರಿಗೆ ನೀಡಲಾಗುತ್ತದೆ. ಅದಾದ ನಂತರ ಎರಡನೇ ಕಂತಿನಲ್ಲಿ ಮಗು ಜನಿಸಿದ ನಂತರ ನೀಡಲಾಗುತ್ತದೆ. ಹೆಣ್ಣು ಮಗು ಜನಿಸಿದ ಮೂರು ತಿಂಗಳ ನಂತರ 6,000ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.
ಯೋಜನೆಯ ಅರ್ಹತೆ ಗಳು :
ಪ್ರಧಾನಮಂತ್ರಿ ಮಾತೃ ವಂದನ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಹೊಂದಿರಬೇಕು ಅವುಗಳೆಂದರೆ, 19 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗರ್ಭಿಣಿಯರು ಈ ಯೋಜನೆಗೆ ಅರ್ಜಿ ಸಲ್ಲಿಸುವ ಹಾಗಿಲ್ಲ. ಜನವರಿ 1, 2017 ರಂದು ಅಥವಾ ಅದರ ನಂತರ ಗರ್ಭಿಣಿಯಾದ ಮಹಿಳೆಯರನ್ನು ಈ ಯೋಜನೆಗೆ ಅರ್ಹರೆಂದು ಪರಿಗಣಿಸಲಾಗುತ್ತದೆ.
ಪ್ರಮುಖ ದಾಖಲೆಗಳು :
ಪ್ರಧಾನಮಂತ್ರಿ ಮಾತೃ ವಂದನ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಮಗುವಿನ ಜನನ ಪ್ರಮಾಣ ಪತ್ರ ,ಪಡಿತರ ಚೀಟಿ ,ತಂದೆ ಹಾಗೂ ತಾಯಿಯ ಆಧಾರ್ ಕಾರ್ಡ್ ,ಬ್ಯಾಂಕ್ ಪಾಸ್ ಬುಕ್ ,ಇಬ್ಬರು ಪೋಷಕರ ಗುರುತಿನ ಚೀಟಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://wcd.nic.in/
ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಇದರಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ ಅರ್ಜಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರವು ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ.
ಹೀಗೇಕೆ ಕೇಂದ್ರ ಸರ್ಕಾರವು ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿ ಮಹಿಳೆಯರಿಗೆ ಈ ಯೋಜನೆಯ ಅಡಿಯಲ್ಲಿ ಅವರಿಗೆ ಸಹಾಯವಾಗುವ ಉದ್ದೇಶದಿಂದ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ, ಈ ಯೋಜನೆಯ ಎಲ್ಲಾ ಸೌಲಭ್ಯಗಳನ್ನು ಪಡೆಯುವಂತೆ ನಿಮಗೆ ತಿಳಿದಿರುವ ಯಾರಾದರೂ ಗರ್ಭಿಣಿ ಮಹಿಳೆಯರು ಅಥವಾ ಬಾಣಂತಿ ಮಹಿಳೆಯರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಭಾರತದಲ್ಲಿ ಅತಿ ಹೆಚ್ಚು ರೈಲು ನಿಲ್ಲುವ ಸ್ಟೇಷನ್ ಯಾವುದು?
ಕಾರ್ಮಿಕ ಮಕ್ಕಳಿಗೆ ಗುಡ್ ನ್ಯೂಸ್! 7 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್; ಯಾವಾಗ ಬರಲಿದೆ ಗೊತ್ತಾ?