ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಉದ್ಯೋಗವಕಾಶದ ಬಗ್ಗೆ. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸಹಿಸುದ್ದಿಯನ್ನು ನೀಡಿದೆ ಎಂದು ಹೇಳಬಹುದು. 63 ಹುದ್ದೆಗಳು ರಾಯಚೂರು ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳ ಬರ್ತಿಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಕೆಎಂಎಫ್ ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾದರೆ ಈ ಹುದ್ದೆಗಳಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಅರ್ಹತೆಗಳೇನು ಯಾವು ಇನ್ನ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ಕೆಎಂಎಫ್ ಅಧಿಸೂಚನೆ :
ಈ ಹುದ್ದೆಗಳಿಗೆ ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲ ಮಾಡುವ ಉದ್ದೇಶದಿಂದ ಅಧಿಸೂಚನೆಗೆ ಸಂಬಂಧಪಟ್ಟಂತೆ ಕೆಲವೊಂದು ಪ್ರಮುಖ ಅಂಶಗಳ ಬಗ್ಗೆ ಇದರಲ್ಲಿ ತಿಳಿಸಲಾಗುತ್ತಿದೆ.
ಉದ್ಯೋಗ ಸಂಸ್ಥೆಗಳ ಹೆಸರು :
ಬಳ್ಳಾರಿ ಕೊಪ್ಪಳ ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ನಲ್ಲಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ :
ಒಟ್ಟು ಹುದ್ದೆಗಳ ಸಂಖ್ಯೆ ಈ ಕೆಎಂಎಫ್ ನಲ್ಲಿ– 63.
ಹುದ್ದೆಗಳ ಹೆಸರು : ಕೆಲವೊಂದು ಹುದ್ದೆಗಳನ್ನು ಈ ಕೆಳಕಂಡಂತೆ ತಿಳಿಸಲಾಗಿದ್ದು ಅವುಗಳೆಂದರೆ ,ಉಪ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು, ಮಾರುಕಟ್ಟೆ ಅಧಿಕಾರಿ, ತಾಂತ್ರಿಕ ಅಧಿಕಾರಿ ,ಸಾರ್ವಜನಿಕ ಸಂಪರ್ಕ ಅಧಿಕಾರಿ, ಕಿರಿಯ ತಂತ್ರಜ್ಞಾನ ,ಕ್ಷೇತ್ರ ಸಹಾಯಕ ,ಡೈರಿ ಮೇಲ್ವಿಚಾರಕರು ಚಾಲಕ ಮತ್ತು ವಿವಿಧ ಹುದ್ದೆಗಳನ್ನೂ ಆಹ್ವಾನಿಸಲಾಗಿದೆ.
ವೇತನ ಶ್ರೇಣಿ :
ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತಿದ್ದು ಅಂದಾಜು 21 400 ರೂಪಾಯಿಗಳಿಂದ 99,600 ಗಳಷ್ಟು ವೇತನವನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿದಾರರು ಆಯಾ ಹುದ್ದೆಗಳ ಅನುಸಾರವಾಗಿ ವಿದ್ಯಾಭ್ಯಾಸವನ್ನು ಹೊಂದಿರಬೇಕು ಅಂದರೆ ಎಸ್ ಎಸ್ ಎಲ್ ಸಿ ,ಬಿ ಎಸ್ ಸಿ, ಬಿ ವಿ ಎಸ್ ಸಿ, ಪದವಿ, ಪಿಜಿ ಪದವಿ ,ಎಂಬಿಎ ,ಎಂಕಾಂ ,ಬಿ ಟೆಕ್ ಹೀಗೆ ಯಾವುದಾದರು ಯಾವುದಾದರು ಹೊಂದಿರಬಹುದಾಗಿದೆ.
ವಯಸ್ಸಿನ ಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. 2ಎ,2ಬಿ, 3ಎ ,3ಬಿ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ಹಾಗೂ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದೆ.
ಅರ್ಜಿ ಶುಲ್ಕ :
750 ರೂಪಾಯಿಗಳು ಪ್ಲಸ್ ಬ್ಯಾಂಕ್ ಶುಲ್ಕವನ್ನು ಪ್ರತ್ಯೇಕವಾಗಿ ಎಸ್ಸಿ ಎಸ್ಟಿ ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. 1500 ರೂಪಾಯಿಗಳನ್ನು ಜೊತೆಗೆ ಬ್ಯಾಂಕ್ ಶುಲ್ಕವನ್ನು ಪ್ರತ್ಯೇಕವಾಗಿ ಉಳಿದ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕ ಪೇಮೆಂಟ್ ಮಾಡಿ ಅರ್ಜಿ ಶುಲ್ಕ ಮಾಡಿದ ಪಾವತಿ ಮಾಡಿದ ರಶೀದಿಯನ್ನು ಪಡೆದುಕೊಳ್ಳಬೇಕು.
ಇದನ್ನು ಓದಿ : ಊಟ ಅಥವಾ ನೀರನ್ನು ಯಾವ ಸಾಕು ಪ್ರಾಣಿ ಸೇವಿಸುವುದಿಲ್ಲ?
ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿದ್ದು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಧಿಕೃತ ವೆಬ್ಸೈಟ್ ಎಂದರೆ https://www.rbkmul.in ಈ ವೆಬ್ ಸೈಟ್ ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಗತ್ಯವಿರುವ ದಾಖಲೆಗಳು :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ್ ಕಾರ್ಡ್ ಇತ್ತೀಚಿನ ಭಾವಚಿತ್ರ ಮತ್ತು ಸಹಿ ಮೊಬೈಲ್ ನಂಬರ್ ಇಮೇಲ್ ಐಡಿ ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇನ್ನಿತರ ಕೆಲವು ಪ್ರಮುಖ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.
ಹೀಗೆ ಕರ್ನಾಟಕದಲ್ಲಿ ಕೆಎಂಎಫ್ ಆಸಕ್ತ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಹುದ್ದೆಯನ್ನು ಪಡೆಯಲು ಬಯಸುತ್ತಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ರೇಷನ್ ಅಕ್ಕಿ! ಯಾರಿಗೆಲ್ಲಾ ಸಿಗಲಿದೆ ಈ ಯೋಜನೆಯ ಲಾಭ?