ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ಯೋಜನೆ ಏನೆಂದರೆ, ಗಂಗಾ ಕಲ್ಯಾಣ ಯೋಜನೆಯ ಬಗ್ಗೆ, ನೀರಾವರಿ ವ್ಯವಸ್ಥೆ ಗ್ರಾಮೀಣ ಪ್ರದೇಶದಲ್ಲಿ ಇಲ್ಲದ ಸ್ಥಳಗಳಲ್ಲಿ ಕೊಳವೆಬಾವಿ ನೀರಾವರಿ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ಭೂ ತತ್ವಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲ ಬಿಂದು ವ್ಯಾಪ್ತಿಯೊಳಗೆ ಸರ್ಕಾರವು ಕೊಳವೆಬಾವಿ ಕೊರೆಸಿ ನಂತರ ನೀರನ್ನು ಸಂಗ್ರಹಿಸಲು ಟ್ಯಾಂಕನ್ನು ನಿರ್ಮಿಸಲು ಸಹಾಯಧನವನ್ನು ನೀಡುತ್ತಿದೆ.

ಹಾಗಾದರೆ ಈ ಯೋಜನೆಯ ಪ್ರಯೋಜನವನ್ನು ಯಾರೆಲ್ಲ ಪಡೆಯಬಹುದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಯೋಜನೆಯ ಪ್ರಯೋಜನ ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೋಡಬಹುದಾಗಿದೆ.
ಗಂಗಾ ಕಲ್ಯಾಣ ಯೋಜನೆ :
ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗಾಗಿ ನೀರನ್ನು ಒದಗಿಸಲು ಕೊಳವೆ ಬಾವಿಯನ್ನು ಕೊರೆಸಿ ಟ್ಯಾಂಕನ್ನು ನಿರ್ಮಿಸಲು ಸಹಾಯಧನವನ್ನು ಈ ಯೋಜನೆಯ ಮೂಲಕ ಪಡೆಯಬಹುದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ರೈತರು ಈ ಯೋಜನೆಯ ಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಒಂದು ಕೊಳವೆ ಬಾವಿಯನ್ನು ಒಂದು ಎಕರೆ 20 ಕುಂಟೆಯಿಂದ ಹಿಡಿದು 5 ಎಕರೆಯನ್ನು ಹೊಂದಿರುವ ಫಲಾನುಭವಿಗಳಿಗೆ ಈ ನಿಗಮದಿಂದ ಅಳವಡಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಯೋಜನೆಗೆ ಸರ್ಕಾರವು 2 ಲಕ್ಷ ರೂಪಾಯಿಗಳವರೆಗೆ ಹಣವನ್ನು ನಿಗದಿಪಡಿಸಿದ್ದು ವಿದ್ಯುತ್ ಈ ಕಾರಣ ಸೇರಿ ಒಟ್ಟು ವೆಚ್ಚ 1.50 ಲಕ್ಷವಾಗಿರುತ್ತದೆ. ಈ ಹಣದಲ್ಲಿ ವಿದ್ಯುದು ಕರಣ ಠೇವಣಿ ಮೊತ್ತ ಕೊಳವೆ ಬಾವಿಯ ಕೊರೆಸುವಿಕೆ ಹಾಗೂ ಪಂಪ್ಸೆಟ್ ಸರಬರಾಜು ಮತ್ತವು ಸಹ ಸೇರಿರುತ್ತದೆ. ಎಲ್ಲ ರೈತರಿಗೆ ಸಹಾಯ ಮಾಡುವ ಮತ್ತು ನೀರಾವರಿ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈ ಅದ್ಭುತ ಯೋಜನೆಯನ್ನು ಪ್ರಾರಂಭಿಸಿದೆ.
ಯೋಜನೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :
ಕಲ್ಯಾಣ ಯೋಜನೆಗೆ ರೈತರು ಅರ್ಜಿಯನ್ನು ಸಲ್ಲಿಸಬೇಕಾದರೆ ನವೆಂಬರ್ 20ರ ಒಳಗಾಗಿ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಲ್ಲಿಸಬೇಕಾದರೆ ನಿಮ್ಮ ಹತ್ತಿರದ ಗ್ರಾಮವನ್ ಅಟಲ್ ಜನ ಸ್ನೇಹಿ ಸೇವಾ ಕೇಂದ್ರ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಲಕ್ಷ ರೂಪಾಯಿಗಳವರೆಗೆ ಬೋರ್ವೆಲ್ ಪಂಪ್ಸೆಟ್ ಪೂರೈಕೆಯ ವಿದ್ಯುತ್ಕರಣಕ್ಕೆ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಠೇವಣಿ ಮಾಡಲಾಗುತ್ತದೆ.
ನಾಲ್ಕು ಲಕ್ಷ ರೂಪಾಯಿಗಳವರೆಗೆ ಸಹಾಯಧನವನ್ನು ಬೆಂಗಳೂರು ಗ್ರಾಮಾಂತರ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರಾಜ್ಯ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ನೀಡುತ್ತದೆ ಹಾಗೂ ಇತರ ಜಿಲ್ಲೆಗಳಿಗೆ ಮೂರು ಲಕ್ಷ ರೂಪಾಯಿಗಳ ವರೆಗೆ ಮೊತ್ತವನ್ನು ಗಂಗಾ ಕಲ್ಯಾಣ ಯೋಜನೆಗೆ ಅನುದಾನವಾಗಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ರೈತರು ಕಲ್ಯಾಣ ಮಿತ್ರ 24*7 ಸಹಾಯವಾಣಿ ಸಂಖ್ಯೆಯಾದ 9482300400 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಯೋಜನೆಗೆ ಅಗತ್ಯವಿರುವ ದಾಖಲೆಗಳು :
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ,ಆಧಾರ್ ಕಾರ್ಡ್, ಇತ್ತೀಚಿನ ಆರ್ ಟಿ ಸಿ ,ಚುನಾವಣ ಗುರುತಿನ ಚೀಟಿ ,ಪಡಿತರ ಚೀಟಿ ,ಸಣ್ಣ ಅಥವಾ ಅತೀ ಸಣ್ಣ ಹಿಡುಳಿದಾರರ ದೃಢೀಕರಣ ಪತ್ರ ,ಬ್ಯಾಂಕ್ ಪಾಸ್ ಬುಕ್ ,ಜಮೀನುದಾರರ ಸ್ವಯಂ ಘೋಷಣ ಪತ್ರ ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಹೊಂದುವುದರ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಮಳೆ ಎಚ್ಚರಿಕೆ: ಈ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ! ಮುಂದಿನ 74 ಗಂಟೆಗಳ ಕಾಲ
ಈ ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು :
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗರ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಯಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಗಮಗಳಿಗೆ ಸಂಬಂಧಿಸಿದ ಜನರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ರೈತರಿಗಾಗಿ ತಮ್ಮ ಜಮೀನಿನಲ್ಲಿ ಹೆಚ್ಚು ಇಳುವರಿಯನ್ನು ಪಡೆಯುವ ಉದ್ದೇಶದಿಂದ ನೀರಾವರಿ ಸೌಲಭ್ಯ ಇಲ್ಲದ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯ ಅಡಿಯಲ್ಲಿ ಕೊಳವೆ ಬಾವಿಯನ್ನು ನಿರ್ಮಿಸಿ ಅದಕ್ಕೆ ಸಂಬಂಧಿಸಿದಂತೆ ನೀರನ್ನು ಒದಗಿಸಲು ಯೋಚಿಸುತ್ತಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಅವರ ಜಮೀನಿನಲ್ಲಿ ನೀರಾವರಿ ಸೌಲಭ್ಯವನ್ನು ಹೊಂದಿಲ್ಲದಿದ್ದರೆ ಸರ್ಕಾರದ ಈ ಯೋಜನೆಯ ಬಗ್ಗೆ ತಿಳಿಸಿ ಕೊಳವೆಬಾವಿಯನ್ನು ನಿರ್ಮಿಸಲು ಈ ಯೋಜನೆ ಮೂಲಕ ಸಹಾಯಧನವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ರಾಜ್ಯ ಸರ್ಕಾರದಿಂದ 7 ಹೊಸ ಯೋಜನೆ ಜಾರಿ : ಅನುಕೂಲಗಳನ್ನು ತಿಳಿದುಕೊಳ್ಳಿ
ಕರ್ನಾಟಕದ ವಿದ್ಯಾರ್ಥಿಗಳಿಗೆ 20 ಸಾವಿರ ಸ್ಕಾಲರ್ಶಿಪ್ ಇಂದೇ ಅಪ್ಲೈ ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುತ್ತೆ