rtgh

Business Loan

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ಹಾನ-2023; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Join WhatsApp Group Join Telegram Group
Application Invitation for Various Schemes

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಡಾ. ಬಿಆರ್ ಅಂಬೇಡ್ಕರ್ ರವರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳ ಮೂಲಕ ಸಾಕಷ್ಟು ಸೌಲಭ್ಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಪಡೆಯಬಹುದಾಗಿದೆ. ಹಾಗಾದರೆ ಈ ನಿಗಮದಿಂದ ಯಾವೆಲ್ಲ ಯೋಜನೆಗಳು ಲಭ್ಯವಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.

Application Invitation for Various Schemes

ಡಾ. ಬಿ ಆರ್ ಅಂಬೇಡ್ಕರ್ ನಿಗಮ :

2023 24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋರ್ಟಲ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಈ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಅದರ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನವನ್ನು ನೀಡಲಾಗುತ್ತದೆ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಘಟಕ ವೆಚ್ಚ ಒಂದು ಲಕ್ಷ ರೂಪಾಯಿ ಆಗಿದ್ದು 50,000 ರೂಪಾಯಿ ಸಹಾಯಧನ ಹಾಗೂ 50,000 ಶೇಖಡ ನಾಲ್ಕರ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ :

ಉದ್ಯಮಶೀಲಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ವ್ಯಾಪಾರ ಮತ್ತು ಇತರ ಉದ್ಯಮಗಳಿಗೆ ಸಾಲ ಸೌಲಭ್ಯ ಹಾಗೂ ಸಹಾಯಧನವನ್ನು ನೀಡಲಾಗುತ್ತದೆ. ಬ್ಯಾಂಕ್ ಸಾಲವಾಗಿರುತ್ತದೆ ಹಾಗೂ ಇದರಲ್ಲಿ ಶೇಕಡ 70ರಷ್ಟು ಸಹಾಯಧನ ಅಥವಾ ಗರಿಷ್ಠ 2 ಲಕ್ಷ ರೂಪಾಯಿಗಳಷ್ಟು ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಸ್ವಾವಲಂಬಿ ಸಾರಥಿ ಯೋಜನೆ :

ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಸರಕು ವಾಹನ ಅಥವಾ ಟ್ಯಾಕ್ಸಿಯನ್ನು ಖರೀದಿಸುವ ಉದ್ದೇಶಕ್ಕಾಗಿ ಶೇಕಡ 75 ರಷ್ಟು ಸಹಾಯಧನ ಅಥವಾ ಗರಿಷ್ಠ ನಾಲ್ಕು ಲಕ್ಷ ರೂಪಾಯಿಗಳ ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

ಮೈಕ್ರೋ ಕ್ರೆಡಿಟ್ ಯೋಜನೆ :

ಮಹಿಳಾ ಸ್ವಸಹಾಯ ಸಂಘಗಳಿಗೆ ಮೈಕ್ರೋಕ್ರೆಡಿಟ್ ಯೋಜನೆಯ ಮೂಲಕ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯ ಧನ ಸೌಲಭ್ಯವನ್ನು ನೀಡಲಾಗುತ್ತಿದ್ದು ಇದರಲ್ಲಿ 1.50 ಲಕ್ಷ ರೂಪಾಯಿ ಸಹಾಯಧನ ಹಾಗೂ ಒಂದು ಲಕ್ಷ ರೂಪಾಯಿಗಳವರೆಗೆ ಶೇಕಡ ನಾಲ್ಕರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.

ಭೂ ಒಡೆತನ ಯೋಜನೆ :

ಭೂ ಒಡೆತನ ಯೋಜನೆ ಅಡಿಯಲ್ಲಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನನ್ನು ಖರೀದಿಸಲು ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಯೋಜನೆಯ ಅಡಿಯಲ್ಲಿ ಮಹಿಳಾ ಕೃಷಿ ಕಾರ್ಮಿಕರಿಗೆ ಶೇಕಡ 50ರಷ್ಟು ಸಹಾಯಧನ ಹಾಗೂ 50ರಷ್ಟು ಆರು ಪರ್ಸೆಂಟ್ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ.

ಗಂಗಾ ಕಲ್ಯಾಣ ಯೋಜನೆ :

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ ವಿದ್ಯುತ್ಕರಣ ಗೊಳಿಸಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯಡಿಯಲ್ಲಿ 3.75 ಲಕ್ಷ ಹಾಗೂ 50,000ಗಳವರೆಗೆ ಸಾಲವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಈ ಮೇಲಿನ ಎಲ್ಲ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ಕೆಳಕಂಡ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ.
ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಕರ್ನಾಟಕವನ್ನು ಹಾಗೂ ಗ್ರಾಮವನ್ ಕೇಂದ್ರಗಳಲ್ಲಿ 29ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ಅಧಿಕೃತ ವೆಬ್ಸೈಟ್ https://sevasindhu.karnataka.gov.in ಈ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಗಮದ ನಿರ್ದೇಶಕ ಮಂಡಳಿ ವಿವೇಚನ ಕೋಟ ಅಥವಾ ಸರ್ಕಾರದ ಸಾಂಸ್ಥಿಕ ಕೋಟದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾ ಸಿಂಧು ಕೋರ್ಟ್ ಮೂಲಕವೇ ಸಲ್ಲಿಸಬೇಕಾಗಿದ್ದು ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಮಂಗಳೂರಿನ ಜಿಎಚ್ಎಸ್ ರಸ್ತೆಯ ಜನತಾ ಬಜಾರ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯವನ್ನು ಸಂಪರ್ಕಿಸುವುದು ಮೂಲಕ ಹೆಚ್ಚಿನ ಮಾಹಿತಿಯನ್ನು ಈ ಯೋಜನೆಗೆ ಸಂಬಂಧಿಸಿ ದಂತೆ ಪಡೆಯಬಹುದಾಗಿದೆ. ಹೀಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಈ ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಪ್ರಯೋಜನವನ್ನು ಪಡೆಯುವಂತೆ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಬಡ್ಡಿರಹಿತ ಸಾಲಕ್ಕಾಗಿ ಪರದಾಡುವ ರೈತರಿಗೆ ಗುಡ್‌ ನ್ಯೂಸ್:‌ ಸರ್ಕಾರದಿಂದ ಸಿಗಲಿದೆ 5 ಲಕ್ಷ ಬಡ್ಡಿರಹಿತ ಸಾಲ!

ನೌಕರರಿಗೆ ದೀಪಾವಳಿ ಹಬ್ಬಕ್ಕೆ ಬಂಪರ್ ಆಫರ್

Treading

Load More...