ಹಲೋ ಸ್ನೇಹಿತರೇ, ಹೊ ಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹತಿ ಏನೆಂದರೆ, ರಾಜ್ಯ ಸರ್ಕಾರವು ಗೃಹಲಕ್ಷ್ಮಿಯರಿಗೆ ಯೋಜನೆಯ ಹಣವನ್ನು ಡಿಬಿಟಿ ಮೂಲಕ ಅವರ ಖಾತೆಗಳಿಗೆ ಕೆಲವು ದಿನಗಳಲ್ಲಿ ಜಮಾ ಮಾಡಲಾಗುತ್ತದೆ. ಮಹಿಳೆಯರ ಖಾತೆಗಳಲ್ಲಿ ದೋಷವಿದ್ದರೆ ಮನೆಯ ಯಜಮಾನನ ಖಾತೆಗೆ ಆ ಹಣವನ್ನು ಜಮಾ ಮಾಡಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು DBT ಮೂಲಕ ಅವರ ಖಾತೆಗಳಿಗೆ ಜಮಾ ಮಾಡುತ್ತಿದ್ದೆ. ಆದರೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಕೂಡ ಈ ಕಂತಿನ ಹಣವಾದ 2000 ರೂಗಳು ಸಿಕ್ಕಿಲ್ಲ. ರಾಜ್ಯ ಸರ್ಕಾರವು ಇನ್ನು ಏಕೆ ಹಣವನ್ನು ಜಮಾ ಮಾಡಿಲ್ಲ ಎಂಬುದು ದೊಡ್ಡ ಪ್ರಶ್ನೆಯಾಗಿ ಉಳಿಯುತ್ತದೆ. ಸದ್ಯ ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಈ ಬಗ್ಗೆ ಮಹತ್ತರ ಸಭೆಯನ್ನು ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.17 ಕೋಟಿ ಫಲಾನುಭವಿಗಳು ಈಗಾಗಲೇ ನೋಂದಣಿಯಾಗಿದ್ದು 1.10 ಕೋಟಿ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಆದರೆ ಇನ್ನು 2 ಲಕ್ಷ ಫಲಾನುಭವಿಗಳಿಗೆ ಹಣ ಜಮಾ ಮಾಡಲು ಸರ್ಕಾರದಿಂದ ತಾಂತ್ರಿಕ ದೋಷಗಳು ಎದರುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿದ್ದು, ಇನ್ನುಂದೆ ಮನೆ ಯಜಮಾನನ ಖಾತೆಗೆ ಹಣವನ್ನು ಜಮಾ ಮಾಡಲು ನಿರ್ಧಾರ ಮಾಡಲಾಗಿದೆ.
ಸದ್ಯ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇನ್ಮುಂದೆ ಅವರ ಗಂಡನ ಖಾತೆಗೆ ಜಮಾ ಮಾಡಲಾಗುತ್ತದೆ. ರಾಜ್ಯದಲ್ಲಿ ಈ ಯೋಜನೆಯು ಅನುಷ್ಟಾನಗೊಂಡು ಕೂಡ ಇನ್ನು ಬಗೆಹರಿಯದೆ ಉಳಿದಿರುವಂತಹ ಸಮಸ್ಯೆಯಾಗಿದೆ. 3-4 ತಿಂಗಳುಗಳು ಕಳೆದರೂ ಕೂಡ ಇನ್ನು ಗೃಹಲಕ್ಷ್ಮಿ ಸಮಸ್ಯೆ ಬಗೆಹರಿಯದೆ ಅರ್ಹರಿಗೆ ಈ ಹಣ ಲಭ್ಯವಾಗುತ್ತಿಲ್ಲ. ಈ ಹಣ ಜಮಾ ಮಾಡಲು ಸರ್ಕಾರವು ಪ್ರಯತ್ನಿಸುತ್ತಿದೆ. ಶೀಘ್ರದಲ್ಲೇ ಬಗೆಹರಿಸುವುದಾಗಿ ಭರವಸೆ ನೀಡಿದೆ.
ಇದನ್ನು ಸಹ ಓದಿ: ಹೊಸ BPL ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ನೀಡಿದ ಆಹಾರ ಇಲಾಖೆ!
ಇದೀಗ ರಾಜ್ಯದಲ್ಲಿ ಮಹಿಳೆಯರ ಖಾತೆಗೆ ಹಣ ಜಮಾ ಮಾಡುವಲ್ಲಿ ಮಹತ್ವದ ಬದಲಾವಣೆಯನ್ನು ಜಾರಿಗೆ ತರಲು ನಿರ್ದಾರ ಮಾಡಿದೆ. ಮಹಿಳೆಯರ ಬದಲು ಮನೆಯ ಯಜಮಾನನ ಖಾತೆಗೆ ಈ ಹಣವನ್ನು ಜಮಾ ಮಾಡಲಾಗುತ್ತದೆ. ಮನೆಯ ಯಜಮಾನಿಯ ಖಾತೆಗೆ ಹಣ ವರ್ಗಾಯಿಸಲು ತೊಂದರೆಯಾದರೆ ಮನೆಯ ಮನೆಯ 2ನೇ ಸದಸ್ಯರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಆಧಾರದ ಮೇಲೆ 2 ನೇ ಹಿರಿಯ ಸದಸ್ಯ ಯಾರೆಂದು ಗುರುತಿಸಿ ಯೋಜನೆಯ ಹಣವನ್ನು ಜಮಾ ಮಾಡಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೆ ಕರೆದೊಯ್ದು ಅವರ ಸಮಸ್ಯೆಯನ್ನು ಬಗೆಹರಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಎಲ್ಲಾ ಅರ್ಹ ಫಲಾನುಭವಿಗಳ ಗುಂಪಿಗೆ ನೆರವು ಕ್ರಮ ಕೈಗೊಳ್ಳಲಾಗುವುದು. ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ.
ಡಿಸೆಂಬರ್ ಒಳಗೆ ಅರ್ಹ ಫಲಾನುಭವಿಗಳಿಗೆ ನಗದು ಹಣವನ್ನು ವರ್ಗಾವಣೆ ಮಾಡುವಂತೆ ಸಿದ್ದು ಸರ್ಕಾರವು ಘೋಷಣೆಯನ್ನು ಮಾಡಿದೆ. ಗೃಹಲಕ್ಷ್ಮಿಯರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಇತರ ಸಮಸ್ಯೆಯಿದ್ದರೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜಿಸಿ ಸಮಸ್ಯೆ ಪರಿಹರಿಸಲು ಕ್ರಮವನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ದುಅವರು ಘೋಷಣೆ ಮಾಡಿದ್ದಾರೆ.
ಇತರೆ ವಿಷಯಗಳು:
LPG ಗ್ಯಾಸ್ ಗ್ರಾಹಕರೇ ಎಚ್ಚರ! ಕೆಂದ್ರದಿಂದ ಹೊಸ ಆದೇಶ..!
ವಾಹನ ಸವಾರರಿಗೆ ಬ್ಯಾಡ್ ನ್ಯೂಸ್! ಪೆಟ್ರೋಲ್ ಹಾಗೂ ಡೀಸೆಲ್‌ನ ಹೊಸ ದರಪಟ್ಟಿ ಬಿಡುಗಡೆ!