ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯದ ಈ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಎಲ್ಲೋ ಅಲರ್ಟ್ ಘೋಷಣೆ ಮಾಡಿರುವುದರ ಬಗ್ಗೆ. ರಾಜ್ಯದಲ್ಲಿ ಸಂಪೂರ್ಣವಾಗಿ ಮುಂಗಾರು ಕೈಕೊಟ್ಟ ಬಳಿಕ ಹಿಂಗಾರು ಸ್ವಲ್ಪ ರೈತರಲ್ಲಿ ಭರವಸೆ ಮೂಡಿಸಿದೆ ಎಂದು ಹೇಳಬಹುದು. ರಾಜ್ಯದ 18 ಜಿಲ್ಲೆಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದ್ದು ಸ್ವಲ್ಪ ನೆಮ್ಮದಿಯನ್ನು ಜನರಲ್ಲಿ ತರಿಸಿದೆ ಎನ್ನಬಹುದಾಗಿದೆ. ಅದರಲ್ಲಿಯೂ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು ಆ ಭಾಗಗಳಲ್ಲಿ ಇನ್ನು ಎರಡು ದಿನಗಳ ಕಾಲ ವ್ಯಾಪಕ ಮಳೆ ಸುರಿಯುವ ನೀರಿಕ್ಷೆ ಇದ್ದು ಕೆಲವೊಂದಿಷ್ಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನ್ನು ನೀಡಲಾಗಿದೆ. ಹಾಗಾದರೆ ಯಾವ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬುದರ ಬಗ್ಗೆ ಇದೀಗ ನೀವು ನೋಡಬಹುದು.
ಅದ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ :
ರಾಜ್ಯದ ಅದರಲ್ಲೂ ತಕ್ಷಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮುಂದೆ ಭಾರಿ ಮಳೆಯಾಗಿದ್ದು ಆ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ವ್ಯಾಪಕ ಮಳೆ ಸುರಿಯುವ ನೀರಿಕ್ಷೆ ಇರುವ ಕಾರಣ ಆ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಬುಧವಾರದವರೆಗೆ ಹವಮಾನ ಇಲಾಖೆ ದಕ್ಷಿಣ ಒಳನಾಡಿನ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು 6 cm ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಮಂಗಳವಾರ ಕರಾವಳಿ ಕರ್ನಾಟಕಕ್ಕೆ ಹಳದಿ ಎಚ್ಚರಿಕೆಯನ್ನು ನೀಡಿದ್ದು ಗುರುವಾರದವರೆಗೆ ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಇಡೀ ರಾಜ್ಯದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ಗಾಳಿಯ ಚಂಡಮಾರುತವು ತೊಟ್ಟಿಯಾಗಿ ಎಂದು ಇದರಿಂದ ಸಮುದ್ರದಲ್ಲಿ ಎರಡು ಅಲೆಗಳ ನಡುವಿನ ತಗ್ಗು ಪ್ರದೇಶ ಇದೆ ಎಂದು ಹವಾಮಾನ ಇಲಾಖೆಯ ಮುಖ್ಯಸ್ಥರಾದ ಬೆಂಗಳೂರಿನ ಐ ಎಂ ಡಿ ಮುಖ್ಯಸ್ಥರಾದ ಎ ಪ್ರಸಾದ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಬರ ಪರಿಹಾರ ಹಣ ಪಡೆಯಲು ಈ ನಂಬರ್ ಕಡ್ಡಾಯ ಮಾಡಲಾಗಿದೆ
ಈ ಜಿಲ್ಲೆಗಳಲ್ಲಿ ಭಾರಿ ಮಳೆ :
ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ,ಚಿಕ್ಕಬಳ್ಳಾಪುರ, ತುಮಕೂರು ,ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿರುವ ಮೂಲಕ ಆ ಜಿಲ್ಲೆಗಳು ಹೇಗೆ ಎಲ್ಲೋ ಅಲರ್ಟ್ ಅನ್ನು ನೀಡಲಾಗಿದೆ. ಅದರಂತೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಸಹ ಭಾರಿ ಮಳೆ ಆಗಲಿದ್ದು ಆ ಜಿಲ್ಲೆಗಳಿಗೂ ಎಲ್ಲೋ ಅಲರ್ಟ್ ನೀಡಲಾಗಿದೆ.
ಸೋಮವಾರ ಉತ್ತರ ಕನ್ನಡ ಹಾಸನ ಶಿವಮೊಗ್ಗ ದಕ್ಷಿಣ ಕನ್ನಡ ಮಂಡ್ಯ ಚಾಮರಾಜನಗರ ಉಡುಪಿ, ಹುಬ್ಬಳ್ಳಿ ಯಾದಗಿರಿ ಚಿತ್ರದುರ್ಗ ಕಲಬುರ್ಗಿ ಹಾವೇರಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೂಡ ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು ಬೆಂಗಳೂರು ನಗರದಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರಾಜ್ಯದ ಜನತೆಗೆ ತಿಳಿಸಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಬೆಂಗಳೂರಿನಲ್ಲಿ ಇದ್ದು ಸಂಜೆಯ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗುಡುಗು ಸಹಿತ ಮಳೆಯು ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯೋ ಆಗಲಿದ್ದು ತುಂತುರು ಮಳೆ ಹಗಲಿನಲ್ಲಿ ಬೀಳಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ 43 ಪರ್ಸೆಂಟ್ ಅಷ್ಟು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯ ಕೊರತೆ ಇದ್ದರೂ ಸಹ ಮುಂದಿನ ಮೂರು ನಾಲ್ಕು ದಿನಗಳಲ್ಲಿ ಆ ಭಾಗಗಳಲ್ಲಿ ಸ್ವಲ್ಪ ಚೇತರಿಕೆ ನೀಡುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಹೀಗೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು ಇದರಿಂದ ರೈತರು ಹಾಗೂ ಜನತೆಯ ಮುಖದಲ್ಲಿ ಸಂತೋಷವನ್ನು ಮೂಡಿಸಿದೆ.