ನಮಸ್ಕಾರ ಸ್ನೇಹಿತರೆ, ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿರುವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಇಂಡಿಯನ್ ಪೋಸ್ಟಲ್ ಡಿಪಾರ್ಟ್ಮೆಂಟ್ ಇದೀಗ ಪ್ರಸಕ್ತ ಸಾಲಿನ ಕ್ರೀಡಾಕೂಟದ ಖಾಲಿ ಇರುವ ಹುದ್ದೆಗಳ ಬರ್ತಿಗೆ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದು ಇದೀಗ ಆ ಹುದ್ದೆಗಳಿಗೆ ಅರ್ಜಿಯನ್ನು ಆಸಕ್ತ ಅಭ್ಯರ್ಥಿಗಳು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಪೋಸ್ಟ್ ಆಫೀಸ್ ನಲ್ಲಿ ಯಾವೆಲ್ಲ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳಿ.

ಖಾಲಿ ಇರುವ ಹುದ್ದೆಗಳು :
ಇದೀಗ ಪ್ರಸಾತ ಸಾಲಿನ ಕ್ರೀಡಾಕೂಟದ ಖಾಲಿ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಅನ್ನು ಇಂಡಿಯನ್ ಪೋಸ್ಟರ್ ಡಿಪಾರ್ಟ್ಮೆಂಟ್ ಬಿಡುಗಡೆ ಮಾಡಿದೆ. ಇಲ್ಲಿರುವ ಕೆಲವೊಂದು ಖಾಲಿ ಇರುವ ಹುದ್ದೆಗಳೆಂದರೆ ಪೋಸ್ಟಲ್ ಅಸಿಸ್ಟೆಂಟ್ ಸಾರ್ತಿಂಗ್ ಅಸಿಸ್ಟೆಂಟ್ ಮೇಲ್ ಗಾರ್ಡ್ ಪೋಸ್ಟ್ ಮ್ಯಾನ್ ಎಂಟಿಎಸ್ ಸೇರಿದಂತೆ ಒಟ್ಟು 1899 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗೆ ಪೋಸ್ಟ್ ಆಫೀಸ್ ಇಲಾಖೆಯು ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ.
ಅರ್ಜಿ ಸಲ್ಲಿಸುವ ದಿನಾಂಕ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನವೆಂಬರ್ 10 ರಿಂದ ಡಿಸೆಂಬರ್ 9ರವರೆಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಪೋರ್ಟ್ಸ್ ಕೋಟ ದಡಿಯಲ್ಲಿ 1899 ಹುದ್ದೆಗಳನ್ನು ಅಂಚೆ ಇಲಾಖೆಯು ತುಂಬಲಿದೆ ಎಂದು ಹೇಳಲಾಗುತ್ತಿದೆ. ಈಗಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 9 2023 ಆಗಿರುತ್ತದೆ. ಹಾಗಾಗಿ ಯಾರೆಲ್ಲ ಕೇಂದ್ರ ಸರ್ಕಾರದ ಉದ್ಯೋಗವನ್ನು ಹುಡುಕುತ್ತಿದ್ದಾರೋ ಅವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ :
1899 ಹುದ್ದೆಗಳ ಭರ್ತಿಗಾಗಿ ಅಂಚೆ ಇಲಾಖೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು , ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಹತೆ ಏನೆಂದರೆ, ಎಸ್ ಎಸ್ ಎಲ್ ಸಿ, ಪಿ ಯು ಸಿ ,ಡಿಗ್ರಿ ಉತ್ತೀರ್ಣರಾಗಿರಬೇಕು. ಹೀಗೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಇದರಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆಯಾಗಿ ಕೇಂದ್ರ ಸರ್ಕಾರವು ಅಂಚೆ ಇಲಾಖೆಯಲ್ಲಿ ಸ್ಪೋರ್ಟ್ಸ್ ಕೋಟ ದಡಿಯಲ್ಲಿ 1899 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ನಿಮ್ಮ ಸ್ನೇಹಿತರು ಯಾರಾದರೂ ಕೇಂದ್ರ ಸರ್ಕಾರದ ಹುದ್ದೆಯನ್ನು ಹೊಂದಲು ಬಯಸುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಅವರು ಅಂಚೆ ಇಲಾಖೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಧನ್ಯವಾದಗಳು.
ಇತರೆ ವಿಷಯಗಳು :
ದೀಪಾವಳಿ ಹಬ್ಬಕ್ಕೆ ಭರ್ಜರಿ ಆಫರ್! ಎಲೆಕ್ಟ್ರಿಕಲ್ ಸ್ಕೂಟರ್ ಒಂದು ತಗೊಂಡ್ರೆ ಮತ್ತೊಂದು ಫ್ರೀ