ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಡಿಸೆಂಬರ್ 23 ರಂದು ನಡೆಯಬೇಕಿದ್ದ 545 ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಲಾಗಿದೆ. ಇಂದು ಬೆಳಗಾವಿಯ ಸುವರ್ಣಸೌಧದ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.
ಮುಖ್ಯಮಂತ್ರಿಗಳು ಪರೀಕ್ಷೆ ಮುಂದೂಡಿಕೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇದೀಗ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ.ಅಲ್ಲದೆ 545 ಪಿಎಸ್ ಐ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದ್ದರಿಂದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ರದ್ದಾಗಿತ್ತು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಡಿಸೆಂಬರ್ 23 ರಂದು ಮರು ಪರೀಕ್ಷೆಗೆ ದಿನಾಂಕವನ್ನು ನಿಗದಿಪಡಿಸಿದೆ.
ಇಂತಹ ಮರು ನಿಗದಿತ ಪರೀಕ್ಷೆಯನ್ನು ಮುಂದೂಡುವಂತೆ ಶಾಸಕರು ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಶಾಸಕರಾದ ಎಸ್.ಶರಣಗೌಡ ಪಾಟೀಲ್, ಬಸನಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಮತ್ತಿತರರಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಸಹ ಓದಿ: ಎಲ್ಲಾ ಕಾರ್ಮಿಕರ ಖಾತೆಗೆ ₹1,000 ಜಮಾ..! ಮೋದಿ ಸರ್ಕಾರದಿಂದ ಭರ್ಜರಿ ಲಾಟ್ರಿ
ಪತ್ರದಲ್ಲಿ ಡಿ.23ರಂದು 545 ಪಿಎಸ್ ಐ ನೇಮಕಕ್ಕೆ ಮರು ಪರೀಕ್ಷೆ ನಿಗದಿಯಾಗಿದೆ.ಹೀಗಾಗಿ ನಿಗದಿತ ಪರೀಕ್ಷೆಗೆ ಸಿದ್ಧತೆ ನಡೆಸಲು ಕೇವಲ 20 ದಿನಗಳಿವೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿಯಾಗಿದೆ ಎಂದರು.
ಅಭ್ಯರ್ಥಿಗಳು ಕೇವಲ 20 ದಿನಗಳಲ್ಲಿ ಅಧ್ಯಯನ ಮತ್ತು ಪಿಎಸ್‌ಐ ಪರೀಕ್ಷೆಯನ್ನು ಎದುರಿಸುವುದು ಕಷ್ಟಕರವಾಗಿರುತ್ತದೆ. ಕನಿಷ್ಠ ಮೂರು ತಿಂಗಳ ಕಾಲ ಪರೀಕ್ಷೆಯನ್ನು ಮುಂದೂಡುವಂತೆ ಶಾಸಕರು ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಮತ್ತು ಪ್ರಿಯಾನ್ ಗಾಂಧಿ ಅವರಿಗೆ ಮನವಿ ಮಾಡಿದ್ದರು.
ಅಂತೆಯೇ ಡಿ.23ರಂದು 545 ಪಿಎಸ್ ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿಯಾಗಿದ್ದು, ಈ ಬಾರಿ ಬೆಂಗಳೂರು ಕೇಂದ್ರದಲ್ಲಿ ಮಾತ್ರ ಪಿಎಸ್ ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿತ್ತು. ಇದೀಗ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಒಂದು ತಿಂಗಳ ಕಾಲ ಮುಂದೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇತರೆ ವಿಷಯಗಳು:
ಪಾನ್ ಕಾರ್ಡ್ ಇದ್ದವರಿಗೆ 10000 ರೂ ದಂಡ!! ಸರ್ಕಾರದಿಂದ ಜಾರಿಗೆ ಬಂತು ಹೊಸ ರೂಲ್ಸ್!
ಉದ್ಯೋಗಿಗಳಿಗೆ ಕೇಂದ್ರದಿಂದ ಗುಡ್ ನ್ಯೂಸ್! ಜನವರಿಯಿಂದ 4% ಡಿಎ ಹೆಚ್ಚಳ ಬಂಪರ್ ಜಂಪ್!