rtgh

news

ನವೆಂಬರ್ 23 ರಿಂದ ಕರ್ನಾಟಕದಲ್ಲಿ ಭಾರೀ ಮಳೆ.! ಹವಾಮಾನ ಇಲಾಖೆ ಅಲರ್ಟ್‌

Join WhatsApp Group Join Telegram Group
Weather Report

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹವಾಮಾನ ವರದಿ : ಹವಾಮಾನದಲ್ಲಿ ಪರಿಣಾಮಕಾರಿ ಏರಿಳಿತದ ಪರಿಣಾಮ ನ. 23ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Weather Report

ಮಾನ್ಸೂನ್ ಹೆಚ್ಚು ಸಕ್ರಿಯವಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ. ಇದು ರೈತರಲ್ಲಿ ಸಂತಸ ಮೂಡಿಸಿದೆ.

ನವೆಂಬರ್ 23 ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಸಹ ಓದಿ: ಮೋದಿ ಸರ್ಕಾರದ ಈ ಯೋಜನೆಯಡಿ ಖಾತೆಗೆ 3 ಸಾವಿರ..! ರೈತರಿಗಾಗಿ ಬಂತು ಅದ್ಭುತ ಯೋಜನೆ

ಇನ್ನು, ನ.24ರಂದು ಒಂದು ದಿನ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಎರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆಯ ದೃಷ್ಠಿ ವಿರಳ ಎಂಬಂತಿದೆ. ಮುಂಜಾನೆ ಮತ್ತು ಸಂಜೆ ಇಲ್ಲಿ ಕೊಂಚ ಚಳಿಯ ವಾತಾವರಣವಿದ್ದರೂ ಈ ಭಾಗದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಬದಲಾಗಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ವರದಿ ಸ್ಪಷ್ಟಪಡಿಸಿದೆ.

ಎರಡೂ ಕಡೆಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ:

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಧರ್ಮಸ್ಥಳ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಚಿಕ್ಕಮಗಳೂರಿನ ಶೃಂಗೇರಿ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಕಲಬುರಗಿ ಮತ್ತು ಕಾರವಾರದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ (34.2) ದಾಖಲಾಗಿದೆ. ಉಳಿದಂತೆ ಹೊನ್ನಾವರ, ಶಿರಾಲಿ, ಮಂಗಳೂರು ವಿಮಾನ ನಿಲ್ದಾಣ ಮತ್ತು ಪೆನಂಬೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ..

ಪಿಂಚಣಿ ನಿಯಮ ಬದಲಾವಣೆ.! ಈಗ ಈ ಉದ್ಯೋಗಿಗಳಿಗೆ ಕೈ ತಪ್ಪಿದ ಗ್ರಾಚ್ಯುಟಿ, ಪಿಂಚಣಿ ಮತ್ತು ಪಿಎಫ್‌ನ ಲಾಭ

ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ರಾಜ್ಯ ಸರ್ಕಾರದ ಹೊಸ ಮಾರ್ಗ! ಮಹಿಳೆಯರು ತಕ್ಷಣ ಈ ಕೆಲಸ ಮಾಡಿ

Treading

Load More...